HomeLatest NewsBREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

BREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾದ ಅಲಿಯಾಸ್ ಮಾದುರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಆತನಿಗೆ ಹುಲಿಗಳನ್ನು ಸಾಯಿಸಲು ಕ್ರಿಮಿನಾಷಕ ತಂದು ಕೊಟ್ಟಿದ್ದ ನಾಗರಾಜ್ ಎಂಬಾತನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾದ ಅಲಿಯಾಸ್ ಮಾದುರಾಜುಗೆ ಸೇರಿದ ಹಸುವನ್ನು ಹುಲಿ ಬಲಿಪಡೆದಿತ್ತು. ಇದರಿಂದ ತೀವ್ರವಾಗಿ ದು:ಖಿತನಾಗಿದ್ದ ಮಾದ ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡಿದ್ದ. ಹಸು ಬಲಿ ಪಡೆದಿದ್ದ ಹುಲಿಯನ್ನು ಕೊಲ್ಲಲು ಇಬ್ಬರೂ ನಿರ್ಧರಿಸಿದ್ದರು. ಹುಲಿ ಕೊಲ್ಲಲು ನಾಗರಾಜ್ ಕ್ರಿಮಿನಾಶಕವನ್ನು ತಂದಿದ್ದರು. ಬಳಿಕ ಮೃತ ಹಸುವಿನ ಮೇಲೆ ಕ್ರಿಮಿನಾಶಕ ಸಿಂಪಡಿಸಿ ಬಂದಿದ್ದರು.

ಮರುದಿನ ವಿಷಪೂರಿತ ಹಸುವಿನ ಮಾಂಸ ತಿಂದು ಹುಲಿ ಹಾಗೂ ಹುಲಿ ಮರಿಗಳು ಸಾವನ್ನಪ್ಪಿದ್ದವು. ಇದೀಗ ಪ್ರಕರಣ ಸಂಬಂಧ ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಇಬ್ಬರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular