HomeLatest NewsBREAKING NEWS: ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್!

BREAKING NEWS: ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್!

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಮಾದ ಅಲಿಯಾಸ್ ಮಾದುರಾಜು ಬಂಧಿತ ಆರೋಪಿ. ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ತಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿದ್ದರು. ಆದರೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್ ಮಾದುರಾಜು ಐದು ಹುಲಿಗಳ ಸಾವಿಗೆ ತಾನು ಕಾರಣ. ತಾನೇ ವಿಷಹಾಕಿ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಮಾದ ಅಲಿಯಾಸ್ ಮಾದುರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಂದಲೂ ವಿಚಾರಣೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular