HomeKarnatakaBREAKING NEWS: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಬಾಲಕ ದುರ್ಮರಣ

BREAKING NEWS: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಬಾಲಕ ದುರ್ಮರಣ

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆಯಲ್ಲಿ ನಡೆದಿದೆ.

ಯುಕೆಜಿ ಓದುತ್ತಿದ್ದ ವಿದ್ಯಾರ್ಥಿ 5 ವರ್ಷದ ಶಿವರಾಜ್ ರೋಡಗಿ ಮೃತ ಬಾಲಕ. ಶಾಲೆಗೆ ಬಂದಿದ್ದ ವಿದ್ಯಾರ್ಥಿ ಶಾಲೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಬಾಲಕ ಇಂಡಿ ತಾಲೂಕಿನ ಮಾವಿನಹಳ್ಳಿ ನಿವಾಸಿ. ಘಟನೆ ಬಳಿಕ ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆದರೆ ಆಸ್ಪತ್ರೆಗೆ ಬರುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಯಲ್ಲಿ ಬಾಲಕನ ಶವವಿಟ್ಟು ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ ಶಾಲಾ ಆಡಳಿತ ಮಂಡಳಿಯವರು, ಬಾಲಕನ ಪೋಷಕರು ಬರುವ ಮೊದಲೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಶಾಲಾ ಆಡಳಿತ ಮಂಡಳಿಯ ಅಮಾನವಿಯ ನಡೆಗೆ ಬಾಲಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular