HomeKarnatakaಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿ ಇದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ...

ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿ ಇದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್ ನ 50 ಜನ ಬಿಜೆಪಿ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದೆ ಎಂಬ ಮುರಗೇಶ್ ನಿರಾಣಿ  ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡ್ಡಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆ ಬಳಿಕ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಉಳಿಯಲ್ಲ. ಹಲವು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧತೆ ನಡೆಸಿದ್ದಾರೆ. 5 ತಿಂಗಳು ಟೈಮ್ ಕೊಡುತ್ತೇನೆ  50 ಶಾಸಕರನ್ನು ಕರೆದುಕೊಂಡು ಹೋಗಲಿ ನೋಡೋಣ ಎಂದು ಅವರು ಬಿಜೆಪಿಗೆ ಸವಾಲು ಹಾಕಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ 50 ಜನರು ಬರುವುದಕ್ಕೆ ರೆಡಿ ಇದ್ದಾರೆ.. ಅವರು ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular