HomeKarnatakaKPSC ಮತ್ತು KEA ಪರೀಕ್ಷೆಗಳಿಗೆ ಕರಾಮುವಿಯಿಂದ 50 ದಿನಗಳ ಉಚಿತ ತರಬೇತಿ : ಪ್ರವೇಶಾತಿ ಆರಂಭ

KPSC ಮತ್ತು KEA ಪರೀಕ್ಷೆಗಳಿಗೆ ಕರಾಮುವಿಯಿಂದ 50 ದಿನಗಳ ಉಚಿತ ತರಬೇತಿ : ಪ್ರವೇಶಾತಿ ಆರಂಭ

ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನಡೆಸಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗಾಗಿ ನೋಂದಣಿಗೆ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿ ಕಾರ್ಯಕ್ರಮವು ಮೈಸೂರಿನಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

ನೋಂದಣಿಗೆ ಜುಲೈ 21 ಕೊನೆಯ ದಿನವಾಗಿದೆ. ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ದೂ. 0821-2515944 ಅನ್ನು ಸಂಪರ್ಕಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜ ಕಲ್ಯಾಣ ಇಲಾಖೆ: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್‌ಶಿಪ್ ಪೋರ್ಟಲ್‌ನ ವೆಬ್‌ಸೈಟ್ www.sw.kar.nic.in ಗೆ ಭೇಟಿ ನೀಡಿ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಸ್ಕಾಲರ್ ಶಿಪ್ ಆಯ್ಕೆ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

*ಬೇಕಾಗುವ ಅಗತ್ಯ ದಾಖಲೆ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್, ಸ್ಯಾಟ್ಸ್ ಐಡಿ ಹಾಗೂ ಇತರೆ ದಾಖಲೆ.ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರೂ.2.50 ಲಕ್ಷ ಮಿತಿಯೊಳಗಿರುವ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಖೋಟಾದಡಿ ಸಿಇಟಿ/ನೀಟ್ ಮುಖಾಂತರ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ.10 ಲಕ್ಷ ಇರುವವರು ಸಹ ಅರ್ಜಿ ಸಲ್ಲಿಸಬಹುದು.

*ಬೇಕಾದ ಅಗತ್ಯ ದಾಖಲೆ:*

ಸ್ಯಾಟ್ಸ್ ಐಡಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಗೂ ಇತರೆ ದಾಖಲೆ.ಅರ್ಜಿ ಸಲ್ಲಿಸಲು 2027 ರ ಜನವರಿ 01 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್ ಬಜಾರ್ 1 ನೇ ಗೇಟ್ ಹತ್ತಿರ ಡಾ.ಬಿ.ಆರ್ ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೊ.9480843073 ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular