ಗಮನಿಸಿ: ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read