BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರದ ಚೆಕ್ ವಿತರಣೆ


ಹುತಾತ್ಮ ಯೋಧ, ಕನ್ನಡಿಗ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಿದೆ.ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.

ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅಂತೆಯೇ ಇಂದು ಚೆಕ್ ಹಸ್ತಾಂತರಿಸಲಾಗಿದೆ.

ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ.ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read