HomeKarnatakaಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್ ಹಾಕಿದ ರಾಘವೇಂದ್ರ

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್ ಹಾಕಿದ ರಾಘವೇಂದ್ರ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಗುರುವಾರ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.

ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ‘ಯಡಿಯೂರಪ್ಪ ಉತ್ಸವ’ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸಲಿದೆ. ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ಈ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.

 82 ವರ್ಷದ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಅವರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ.ಎಸ್.ಯಡಿಯೂರಪ್ಪ ಪುತ್ರರಾದ ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷರು, ಶಿಕಾರಿಪುರದ ಶಾಸಕರು. ಮತ್ತೊಬ್ಬ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದ ಸಂಸದರು. ಪುತ್ರರು ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಯಡಿಯೂರಪ್ಪ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಬಿ.ವೈ.ರಾಘವೇಂದ್ರ ಪೋಸ್ಟ್: ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿ.ವೈ.ರಾಘವೇಂದ್ರ ಭಾವುಕ ಪೋಸ್ಟ್ ಒಂದನ್ನು ಹಾಕಿದ್ದಾರೆ. ‘ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು, ಗೌರವಾನ್ವಿತ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರು ರಾಜಕೀಯ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿದ ಈ ಮಹತ್ವದ ಕ್ಷಣಕ್ಕೆ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

‘ರೈತರು, ಬಡವರು ಮತ್ತು ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಅವರ ನಿರಂತರ ಸೇವೆ, ನಿಷ್ಠೆ ಮತ್ತು ದೂರದೃಷ್ಟಿಯ ನಾಯಕತ್ವ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿವೆ. ಭಾರತೀಯ ಜನತಾ ಪಕ್ಷವು ಅವರ ನಾಯಕತ್ವದ ಮೇಲೆ ಅಪಾರ ಹೆಮ್ಮೆ ಹೊಂದಿದ್ದು, ಅವರು ಇನ್ನೂ ದೀರ್ಘಕಾಲ ಆರೋಗ್ಯ ಹಾಗೂ ಶಕ್ತಿಯೊಂದಿಗೆ ದೇಶ ಮತ್ತು ರಾಜ್ಯಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸುತ್ತದೆ’ ಎಂದು ಹೇಳಿದ್ದಾರೆ.

ಯಡಿಯೂರಪ್ಪ ರಾಜಕೀಯ ಜೀವನ

  • 1976ರಲ್ಲಿ ಶಿಕಾರಿಪು ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ
  • 1983ರಿಂದ 8 ಬಾರಿ ಶಾಸಕರಾಗಿ ಆಯ್ಕೆ, ಒಮ್ಮೆ ಎಂಎಲ್‌ಸಿ, ಒಮ್ಮೆ ಸಂಸತ್‌ ಸದಸ್ಯರು
  • ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ, ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕಾರ್ಯ
  • 4 ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ

ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಯಡಿಯೂರಪ್ಪ ರಾಜಕೀಯ ಜೀವನದ 50 ವರ್ಷಗಳನ್ನು ನೆನಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ ‘ಯಡಿಯೂರಪ್ಪ ಉತ್ಸವ’ ನಡೆಸುವ ಕುರಿತು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲು ಈ ಬೃಹತ್ ಸಮಾವೇಶ ನಡೆಯುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular