HomeKarnatakaBIG NEWS : ಬೆಂಗಳೂರಲ್ಲಿ ಇನ್ಮುಂದೆ ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ....

BIG NEWS : ಬೆಂಗಳೂರಲ್ಲಿ ಇನ್ಮುಂದೆ ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ. ದಂಡ : ಜಲಮಂಡಳಿ ಆದೇಶ.!

ಬೆಂಗಳೂರು : ಬೆಂಗಳೂರಿನಲ್ಲಿ ನೀರು ವ್ಯರ್ಥ ಮಾಡುವವರಿಗೆ 5000 ದಂಡ ವಿಧಿಸುವಂತೆ ಜಲಮಂಡಳಿ ಆದೇಶ ಹೊರಡಿಸಿದೆ.

ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಆದೇಶಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈ ಕೆಳಕಂಡ ಉದ್ದೇಶಗಳಿಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ವಾಹನಗಳ ಸ್ವಚ್ಚತೆಗೆ
2. ಕೈದೋಟಕ್ಕೆ
3. ಕಟ್ಟಡ ನಿರ್ಮಾಣಕ್ಕೆ
4. ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ
5. ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ
6. ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ

ಮೇಲ್ಕಂಡ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/-ಪ್ರತಿದಿನದಂತೆ ದಂಡ ಹಾಕಲಾಗುವುದು.ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವ ದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular