HomeKarnatakaಗಮನಿಸಿ : ಭ್ರೂಣಲಿಂಗ ಪತ್ತೆ, ಹತ್ಯೆಯ ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ

ಗಮನಿಸಿ : ಭ್ರೂಣಲಿಂಗ ಪತ್ತೆ, ಹತ್ಯೆಯ ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ

ಮೈಸೂರು : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಯ ಕರಾಳ ದಂಧೆ ಬಯಲಾಗಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

ಇದೀಗ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಯ ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ ಘೋಷಿಸಲಾಗಿದೆ. ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ ಬಹುಮಾನ ಘೋಷಿಸಿದ್ದು ಯಾರು ಭ್ರೂಣಲಿಂಗ ಹತ್ಯೆ ಹಾಗೂ ಭ್ರೂಣ ಲಿಂಗ್ ಪತ್ತೆ ಮಾಡುವ ಜಾಲದ ಬಗ್ಗೆ ಮಾಹಿತಿ ನೀಡುತ್ತಾರೋ ಅವರಿಗೆ 50 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುತ್ತದೆ, ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ನರ್ಸ್ವೊಬ್ಬರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ.ಬಂಧಿತ ಆರೋಪಿಯನ್ನು ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನರ್ಸ್ ಉಷಾರಾಣಿ ಎಂದು ಗುರುತಿಸಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular