HomeKarnatakaBIG NEWS: ರಾಜ್ಯದಲ್ಲಿ 50,025 ಕೋಟಿ ಬಂಡವಾಳ ಹೂಡಿಕೆ; 58 ಸಾವಿರಕ್ಕೂ ಅಧಿಕ ಉದ್ಯೋಗಸೃಷ್ಟಿ ;...

BIG NEWS: ರಾಜ್ಯದಲ್ಲಿ 50,025 ಕೋಟಿ ಬಂಡವಾಳ ಹೂಡಿಕೆ; 58 ಸಾವಿರಕ್ಕೂ ಅಧಿಕ ಉದ್ಯೋಗಸೃಷ್ಟಿ ; ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ಬೆಂಗಳೂರು: 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 50,025 ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿ-ಅಂಶಗಳ ಸಮೇತ ವಿವರಿಸಿದರು.

ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರ್ಕಾರ ಬಿಯಾಂಡ್ ಬೆಂಗಳೂರು ಉಪಕ್ರಮವನ್ನು ಆರಂಭಿಸಿದೆ. ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular