BIG NEWS: 545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ; ಶೀಘ್ರವೇ ತನಿಖಾ ವರದಿ ಸಿಎಂ ಕೈಗೆ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಅದರಂತೆ ತನಿಖೆ ನಡೆಸುತ್ತಿರುವ ಸಮಿತಿ ಶೀಘ್ರದಲ್ಲಿಯೇ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖಾ ವರದಿ ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ. ಈಗಾಗಲೇ ವಿಚಾರಣಾ ಆಯೋಗ ಪಿಎಸ್ ಐ ನೇಮಕಾತಿ ಅಕ್ರಮದ ವರದಿ ಸಿದ್ಧಪಡಿಸಿದೆ. ಇದೇ ವರದಲ್ಲಿ ತನಿಖಾ ವರದಿ ಸಿಎಂ ಗೆ ಒಪ್ಪಿಸುವ ಸಾಧ್ಯತೆ ಇದೆ.

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈಗಾಗಲೇ ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ರಾಜಕೀಯ ನಾಯಕರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ ಈ ಹಿನ್ನೆಲೆಯಲ್ಲಿ ತನಿಖಾ ವರದಿ ತೀವ್ರ ಕುತೂಹಲ ಮೂಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read