HomeKarnatakaಧರ್ಮಸ್ಥಳದಲ್ಲಿ ನಾಳೆ 54ನೇ ವರ್ಷದ ಸಾಮೂಹಿಕ ವಿವಾಹ: 105 ಜೋಡಿ ದಾಂಪತ್ಯ ಜೀವನಕ್ಕೆ

ಧರ್ಮಸ್ಥಳದಲ್ಲಿ ನಾಳೆ 54ನೇ ವರ್ಷದ ಸಾಮೂಹಿಕ ವಿವಾಹ: 105 ಜೋಡಿ ದಾಂಪತ್ಯ ಜೀವನಕ್ಕೆ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ 6:40ಕ್ಕೆ ಗೋಧೂಳಿ ಲಗ್ನ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಡಿ. ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, 105 ಜೊತೆ ವಧು-ವರರು ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಅವರು ನೀಡಿದ ದಾಖಲೆಗಳ ಮೂಲ ಪ್ರತಿಗಳ ಪರಿಶೀಲನೆ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ಕಲ್ಪಿಸಲಾಗುವುದು. ವರನಿಗೆ ಪಂಚೆ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರಗಳನ್ನು ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಕ್ಷಿಣೆ ಮತ್ತು ಮದುವೆವ ದುಂದುವೆಚ್ಚ ತಡೆಯುವ ಉದ್ದೇಶದಿಂದ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ 13,000 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ. ನಾಳಿನ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು 105 ಜೊತೆ ವಧು-ವರರು ನೋಂದಾಯಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular