HomeKarnatakaBIG NEWS: ಒಂದೇ ದಿನ 550 ಪ್ರಕರಣಗಳ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿಸಿದ ನ್ಯಾ. ಎಂ....

BIG NEWS: ಒಂದೇ ದಿನ 550 ಪ್ರಕರಣಗಳ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿಸಿದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಒಂದೇ ದಿನ 550 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಇತಿಹಾಸ ಸೃಷ್ಟಿಸಿದ್ದಾರೆ.

ಹೈಕೋರ್ಟ್ ನಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಬುಧವಾರ ಒಂದೇ ದಿನ 550 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ದಿನದ ಕಲಾಪದ ಅವಧಿ ಮುಗಿದ ನಂತರ ರಾತ್ರಿ ಬಹುತೇಕ ಎಂಟು ಗಂಟೆಯವರೆಗೂ ಅವರು ಕಲಾಪ ನಡೆಸಿದ್ದಾರೆ.

ಮೊದಲೇ ಹೇಳಿದಂತೆ ಕೊನೆಯಲ್ಲಿ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ನಟ ದರ್ಶನ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಮಧ್ಯಾಹ್ನದ ನಂತರ ಕಲಾಪದಲ್ಲಿ 270ಕ್ಕೂ ಅಧಿಕ ಪ್ರಕರಣಗಳ ಮೆಮೊ ವಿಚಾರಣೆ ನಡೆಸಿದ್ದೆಲ್ಲದೆ, ಮೂರು ಪ್ರಕರಣಗಳ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ ಪಟ್ಟಿಯಲ್ಲಿದ್ದ 300ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸಿ ಕೆಲವು ಪ್ರಕರಣಗಳಲ್ಲಿ ಮಧ್ಯಂತರ ಆದೇಶ ನೀಡಿದ್ದಾರೆ. ಮತ್ತೆ ಕೆಲವು ಪ್ರಕರಣಗಳಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ದರ್ಶನ್ ಪರ ವಕೀಲರು ಮತ್ತು ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಲಯ ಇನ್ನೇನು ಆದೇಶ ನೀಡಲಿದೆ ಎಂದು ಕಾಯುತ್ತಿದ್ದರು. ಆಗ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಈಗಾಗಲೇ ಎಂಟು ಗಂಟೆಯಾಗಿದೆ. ಈಗ ಆದೇಶ ಉಕ್ತಲೇಖನ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ದರ್ಶನ್ ಪರ ವಕೀಲರು, ವಿಚಾರಣಾ ನ್ಯಾಯಾಲಯ ಪ್ರದೂಷ್ ಸಾಕ್ಷ್ಯ ದಾಖಲು ಮಾಡಿಕೊಳ್ಳಲು ನಿಗದಿ ಮಾಡಿದ್ದ ವಿಚಾರಣೆ ಮುಂದೂಡಿದೆ. ಬೇರೊಂದು ದಿನ ಆದೇಶ ನೀಡಬಹುದು ಎಂದು ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪರ ವಾದ ಮಂಡನೆಗೆ ಹಾಜರಿದ್ದ ಎಸ್.ಪಿ.ಪಿ. ಪ್ರಸನ್ನ ಕುಮಾರ್ ಪಿ. ಅವರು ಇಂದು ಈಗಾಗಲೇ ನ್ಯಾಯಪೀಠ 550 ಪ್ರಕರಣಗಳ ವಿಚಾರಣೆ ನಡೆಸಿ ಚರಿತ್ರೆ ಸೃಷ್ಟಿಯಾದಂತಾಗಿದೆ. ಇನ್ನೊಂದು ದಿನ ಆದೇಶ ನೀಡಲು ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ ನ್ಯಾಯಪೀಠ ಮಾಫಿ ಸಾಕ್ಷಿ ಪ್ರಶ್ನಿಸಿರುವ ದರ್ಶನ್ ಅರ್ಜಿ ಸಂಬಂಧ ಸೆಪ್ಟೆಂಬರ್ 7ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular