ಒಮ್ಮೆಲೇ 58% ನಬಾರ್ಡ್ ನೆರವು ಕಡಿತ, ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ : CM ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಒಮ್ಮೆಲೇ 58% ನಬಾರ್ಡ್ ನೆರವು ಕಡಿತ, ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ.

ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು. 2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ.

ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು. ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು.
ಪಂಚಾಯತಿ, ಸೊಸೈಟಿ, ಶಾಲೆ ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದರು. ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ ಮಾಡಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read