ಬೆಂಗಳೂರು : ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ”ಯನ್ನು ನಡೆಸಲು BLO Model ನಂತೆ ಜಿಲ್ಲಾಧಿಕಾರಿಗಳು 58,932 ಶಿಕ್ಷಕರನ್ನು ಸಮೀಕ್ಷಾದಾರರಾಗಿ ನೇಮಿಸಿ ಆದೇಶ ಹೊರಡಿಸಿರುತ್ತಾರೆ. ಪ್ರತಿ 10-12 ಸಮೀಕ್ಷೆದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಸಮೀಕ್ಷೆದಾರರು ಮನೆ – ಮನೆಗೆ ತೆರಳಿ ಸಮೀಕ್ಷೆಯನ್ನು ನಡೆಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇ – ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ಮೊಬೈಲ್ ತಂತ್ರಾಂಶದಲ್ಲಿ ಅಳವಡಿಸಿರುವ ತಂತ್ರಜ್ಞಾನದ ಮೂಲಕ ಸಮೀಕ್ಷೆಯನ್ನು ನಡೆಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ತಮ್ಮ ಜಾತಿ/ಮೂಲ ಜಾತಿ / ಶಿಕ್ಷಣ / ಉದ್ಯೋಗ/ ರಾಜಕೀಯ / ಸಾಮಾಜಿಕ ಹಾಗೂ ಆರ್ಥಿಕ ಇತ್ಯಾದಿ ಮಾಹಿತಿಗಳನ್ನು ನೀಡಿ ಸಮೀಕ್ಷೆಗೆ ಸಹಕರಿಸಬೇಕು. ಇದರಿಂದ ಮುಂದೆ ಒಳ ಮೀಸಲಾತಿಯ ಪ್ರಯೋಜನವನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದರು.
ರಾಜ್ಯ/ ಜಿಲ್ಲಾ / ತಾಲೂಕು ಮಟ್ಟದ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ಕೈಗೊಳ್ಳುವ ಸಂಬಂಧ ಈಗಾಗಲೇ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ಇವುಗಳ ಮೇಲುಸ್ತುವಾರಿಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷೆಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಮೊದಲನೇ ಹಂತದಲ್ಲಿ ಇಂದಿನಿಂದ 2025ರ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ 2025ರ ಮೇ 19 ರಿಂದ 2025ರ ಮೇ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೇ ಹಂತದಲ್ಲಿ 2025ರ ಮೇ 19 ರಿಂದ 2025ರ ಮೇ 23ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆಗೆ ನೇಮಕವಾಗಿರುವ ಸುಮಾರು 65,000 ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸಮೀಕ್ಷೆಯ ಕುರಿತು ಈಗಾಗಲೇ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಲಾಗಿರುತ್ತದ ಎಂದರು.
“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ”ಯನ್ನು ನಡೆಸಲು BLO Model ನಂತೆ ಜಿಲ್ಲಾಧಿಕಾರಿಗಳು 58,932 ಶಿಕ್ಷಕರನ್ನು ಸಮೀಕ್ಷಾದಾರರಾಗಿ ನೇಮಿಸಿ ಆದೇಶ ಹೊರಡಿಸಿರುತ್ತಾರೆ. ಪ್ರತಿ 10-12 ಸಮೀಕ್ಷೆದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಸಮೀಕ್ಷೆದಾರರು ಮನೆ – ಮನೆಗೆ ತೆರಳಿ ಸಮೀಕ್ಷೆಯನ್ನು ನಡೆಸಲಿದ್ದಾರೆ.
— Siddaramaiah (@siddaramaiah) May 5, 2025
ಇ – ಆಡಳಿತ ಇಲಾಖೆಯು… pic.twitter.com/TFoJZWzeKb