HomeKarnatakaBREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5ನೇ ಆರೋಪಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು(35) ಬಂಧಿತ ಆರೋಪಿ. ಎಲ್ಇಟಿ ಪಿತೂರಿ ಪ್ರಕರಣದಲ್ಲಿಯೂ ಶೋಯೆಬ್ ಶಿಕ್ಷೆಗೆ ಒಳಗಾಗಿದ್ದ.

ಕಳೆದ ಫೆಬ್ರವರಿ 29 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಆಗಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ತನಿಖೆ ಚುರುಕುಗೊಳಿಸಿದ ಎನ್ಐಎ ಅಧಿಕಾರಿಗಳು ಶಂಕಿತರ ಮಾಹಿತಿ ಕಲೆ ಹಾಕಿದ್ದರು. ಬಾಂಬ್ ಸ್ಪೋಟದ ಸಂಚು ಮತ್ತು ಪರಾರಿಯಾದ ಬಗ್ಗೆ ಇಬ್ಬರು ಶಂಕಿತರು ಕೋಡ್ ವರ್ಡ್ ಮೂಲಕ ಸಂಭಾಷಣೆ ನಡೆಸಿದ ಪುರಾವೆಗಳನ್ನು ಸಂಗ್ರಹಿಸಿದ ಅಧಿಕಾರಿಗಳು ಶೋಯೆಬ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular