BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರೈಲ್ವೆ ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಒಡಿಶಾದಲ್ಲಿ 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಭೀಕರ ಮೂರು ರೈಲುಗಳ ಡಿಕ್ಕಿಯ ತಿಂಗಳ ನಂತರ ಆಂಧ್ರಪ್ರದೇಶದಲ್ಲಿ ಎಕ್ಸ್‌ ಪ್ರೆಸ್ ರೈಲೊಂದು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಭಾನುವಾರ ಡಿಕ್ಕಿ ಹೊಡೆದು ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ. ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ಹೋಗುತ್ತಿತ್ತು. ಓವರ್‌ ಹೆಡ್ ಕೇಬಲ್‌ ನಲ್ಲಿ ಮುರಿದು ಬಿದ್ದ ಕಾರಣ ಅದು ನಿಂತುಹೋಯಿತು. ಒಳಬರುವ ರೈಲು ಪಲಾಸ ಎಕ್ಸ್‌ ಪ್ರೆಸ್ ಮೂರು ಬೋಗಿಗಳನ್ನು ಹಳಿತಪ್ಪಿ ನಿಂತ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿ ರೈಲು ಅಪಘಾತದ ಘಟನೆಯ ಬಗ್ಗೆ ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read