BREAKING NEWS: ಗ್ಯಾಸ್ ಸಿಲಿಂಡರ್ ಸ್ಪೋಟ: ಭಾರೀ ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವು

ಬುಲಂದ್‌ಶಹರ್(ಉತ್ತರ ಪ್ರದೇಶ): ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ.

ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, “ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ರಾತ್ರಿ 8:30-9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದೆ, ಮನೆಯಲ್ಲಿ 18-19 ಜನರಿದ್ದರು, ಎಂಟು ಜನರನ್ನು ರಕ್ಷಿಸಲಾಗಿದೆ. ಮುಖ್ಯ ವೈದ್ಯಕೀಯ ಅಧಿಕಾರಿ 6 ಜನರ ಸಾವನ್ನು ದೃಢಪಡಿಸಿದ್ದಾರೆ, ಇನ್ನೂ ಮೂರು ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಂಡ, ಮುನ್ಸಿಪಲ್ ಕಾರ್ಪೊರೇಷನ್ ತಂಡ, ವೈದ್ಯಕೀಯ ತಂಡ, ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದೆ ಎಂದು ಸಿಂಗ್ ಹೇಳಿದರು.

 

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳುವಂತೆ ನಮಗೆ ಸೂಚಿಸಿದ್ದಾರೆ. ಸ್ಫೋಟಕ್ಕೆ ಕಾರಣಗಳನ್ನು ತನಿಖೆ ಮಾಡಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read