HomeLatest NewsBREAKING: ಗೋವಾದಲ್ಲಿ ಘೋರ ದುರಂತ: ಕಾಲ್ತುಳಿತದಲ್ಲಿ 6 ಜನ ಸಾವು

BREAKING: ಗೋವಾದಲ್ಲಿ ಘೋರ ದುರಂತ: ಕಾಲ್ತುಳಿತದಲ್ಲಿ 6 ಜನ ಸಾವು

ಪಣಜಿ: ಗೋವಾದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದಲ್ಲಿ ಘಟನೆ ನಡೆದಿದೆ.

ಕಾಲ್ತುಳಿತದಲ್ಲಿ 30ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಿರ್ಗಾವ್ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದೆ. ಘಟನೆಯ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದಾರೆ.

ಶಿರ್ಗಾವ್ ತೀರ್ಥಯಾತ್ರೆಯ ಸಮಯದಲ್ಲಿ ಗೋವಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಗೋವಾದ ಶಿರ್ಗಾವ್ ದಲ್ಲಿರುವ ಲೈರೈ ದೇವಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  6 ಜನರು ಸಾವನ್ನಪ್ಪಿದ್ದು,, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉತ್ತರ ಗೋವಾ ಎಸ್‌ಪಿ ಅಕ್ಷತ್ ಕೌಶಲ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular