HomeKarnatakaBREAKING NEWS: ಗೃಹಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮುಂದೆ ಶರಣಾಗತರಾದ 6 ನಕ್ಸಲರು

BREAKING NEWS: ಗೃಹಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮುಂದೆ ಶರಣಾಗತರಾದ 6 ನಕ್ಸಲರು

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ಶರಣಾಗತರಾಗಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಾಗೂ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದ ಪ್ರಯತ್ನ ಯಶಸ್ವಿಯಾಗಿದ್ದು, 6 ನಕ್ಸಲರು ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು.

 

For Latest News Updates, Join Our Whatsapp Community🚩
RELATED ARTICLES

Most Popular