ಬೆಂಗಳೂರು: ಬಾಡಿಗೆ ಮನೆ ಮತ್ತು ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ, ಕೆಆರ್ ಪುರಂ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಅದೇ ರೀತಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು.
ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, ಇಬ್ಬರು ಪುರುಷರು, ನಾಲ್ವರು ಮಹಿಳೆಯರು ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ.

