HomeIndiaBREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದವನಿಗೆ 14 ದಿನಗಳ ನ್ಯಾಯಾಂಗ ಬಂಧನ

BREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದವನಿಗೆ 14 ದಿನಗಳ ನ್ಯಾಯಾಂಗ ಬಂಧನ

Six Weeks Later, Mumbai Man Arrested For Peeing On Woman On Plane

ನ್ಯೂಯಾರ್ಕ್ – ದೆಹಲಿ ನಡುವೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ಶಂಕರ್ ಮಿಶ್ರಾನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಪೊಲೀಸರು ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದು, ಆದರೆ ಆರೋಪಿ ಪರ ವಕೀಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಬಳಿಕ ಶಂಕರ್ ಮಿಶ್ರಾನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆ ಕಳೆದ ನವೆಂಬರ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಆ ಬಳಿಕ ಆರೋಪಿ ಶಂಕರ್ ಮಿಶ್ರಾ ತಲೆಮರೆಸಿಕೊಂಡಿದ್ದು, ಆತ ಬಳಸಿದ ಕ್ರೆಡಿಟ್ ಕಾರ್ಡ್ ಜಾಡು ಹಿಡಿದ ಪೊಲೀಸರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಬಂಧಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular