ಸ್ವಾತಂತ್ರ್ಯ ದಿನಾಚರಣೆಯಂದೇ ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನ: 6 ಯುವಕರು ಅರೆಸ್ಟ್

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುವ ವೇದಿಕೆಯ ಬಳಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನಿಸಿದ ಅನ್ಯಕೋಮಿನ 6 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಕುಣಿಗಲ್ ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅನ್ಯಕೋಮಿನ ಯುವಕರ ಗುಂಪು ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನಿಸಿದೆ.

ಸ್ವಾತಂತ್ರ್ಯ ದಿನಾಚರಣೆ ವೇದಿಕೆ ಕಾರ್ಯಕ್ರಮ ಮುಂಭಾಗ ದೇಶಭಕ್ತಿ ಕಾರ್ಯಕ್ರಮಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಇದನ್ನು ಗಮನಿಸಿದ ಕೆಲವರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ತವರು ಜಿಲ್ಲೆಯಲ್ಲಿಯೇ ಸ್ವಾತಂತ್ರ್ಯ ದಿನಾಚರಣೆಯಂದು ಈ ಘಟನೆ ನಡೆದಿದರುವುದು ಚರ್ಚೆಗೆ ಗ್ರಾಸವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read