HomeUncategorizedಪೋಷಕರ ಗಮನಕ್ಕೆ: 1ನೇ ತರಗತಿ ದಾಖಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಪೋಷಕರ ಗಮನಕ್ಕೆ: 1ನೇ ತರಗತಿ ದಾಖಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 60 ದಿನಗಳ ವಯೋಮಿತಿ ಸಡಿಲಗೊಳಿಸಿ ಆದೇಶ ಹೊರಡಿಸಲಗಿದೆ.

ಒಂದನೇ ತರಗತಿ ದಾಖಲಾತಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಭಾರಿ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆದಾಗ್ಯೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಈ ಗೊಂದಲಗಳ ನಡುವೆ ಇದೀಗ ರಾಜ್ಯ ಸರ್ಕಾರ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ 60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ಮಗುವಿನ ಜನ್ಮದಿನವು ಜೂನ್ 1ರಿಂದ ಮುಂದಿನ 60 ದಿನಗಳ ಒಳಗಿದ್ದರೆ (ಜುಲೈ 30ರ ವರೆಗೆ), ಅಂತಹ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು. ಅದರಂತೆ ಇದೀಗ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. 2 ತಿಂಗಳ ವಿನಾಯಿತಿ ನೀಡಲಾಗಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡ ಮಕ್ಕಳಿಗೂ 1ನೇ ತರಗತಿಗೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular