HomeKarnatakaನಾಮಫಲಕಗಳಲ್ಲಿ ಇನ್ಮುಂದೆ ಶೇ.60 ರಷ್ಟು ಕನ್ನಡ ಕಡ್ಡಾಯ, ಇಲ್ಲದಿದ್ರೆ ಲೈಸೆನ್ಸ್ ರದ್ದು.!

ನಾಮಫಲಕಗಳಲ್ಲಿ ಇನ್ಮುಂದೆ ಶೇ.60 ರಷ್ಟು ಕನ್ನಡ ಕಡ್ಡಾಯ, ಇಲ್ಲದಿದ್ರೆ ಲೈಸೆನ್ಸ್ ರದ್ದು.!

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್ಸಾಬ್ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ.

ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾsಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 03 ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular