HomeKarnatakaನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯ ; ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ...

ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯ ; ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ) ಮಸೂದೆ ಮಂಡನೆ

ಬೆಂಗಳೂರು : ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ.ಪರಮೇಶ್ವರ ಮಸೂದೆಯನ್ನು ಮಂಡಿಸಿದರು. ಮನರಂಜನಾ ಕೇಂದ್ರಗಳು, ಹೋಟೆಲ್ಗಳು, ಪ್ರಯೋಗಾಲಯಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. 2022ರ ಕಾಯ್ದೆಗೆ ಈ ತಿದ್ದುಪಡಿಯನ್ನು ತರಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular