ಐಐಟಿ, ಐಐಎಂ, ಎನ್ಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತಂತೆ ಶಾಕಿಂಗ್ ಸಂಗತಿ ಬಹಿರಂಗ

ಕಳೆದ ಐದು ವರ್ಷಗಳಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಲ್ಲಿ 61 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

2023ರಲ್ಲಿಯೇ ಇಲ್ಲಿಯವರೆಗೆ ಐಐಟಿ ಮತ್ತು ಎನ್‌ಐಟಿಗಳ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಗಳ 61 ವಿದ್ಯಾರ್ಥಿಗಳು 2018-23ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರವು ರಾಜ್ಯಸಭೆಗೆ ತಿಳಿಸಿದೆ.

ಶೈಕ್ಷಣಿಕ ಒತ್ತಡ, ಕೌಟುಂಬಿಕ ಕಾರಣಗಳು, ವೈಯಕ್ತಿಕ ಕಾರಣಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು ಇತ್ಯಾದಿಗಳು ಇಂತಹ ಆತ್ಮಹತ್ಯೆ ಪ್ರಕರಣಗಳಿಗೆ ಕಾರಣವಾಗಿವೆ ಎಂದು ಶಿಕ್ಷಣ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಹೇಳಿದ್ದಾರೆ.

ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಮೂಲ ಕಾರಣವನ್ನು ಪರಿಹರಿಸಲು ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಳಿದಾಗ, ಇವರಿಗೆ ಒತ್ತಡ ಮತ್ತು ಭಾವನಾತ್ಮಕ ಹೊಂದಾಣಿಕೆಗಳನ್ನು ನಿಭಾಯಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಕೇವಲ ಓದು ಅಷ್ಟೇ ಅಲ್ಲದೇ, ಕ್ರೀಡೆಗಳು, ಸಂಸ್ಕೃತಿ/ಕಲಾ ಕ್ಲಬ್‌ಗಳು, ಪರಿಸರ-ಕ್ಲಬ್‌ಗಳು, ಚಟುವಟಿಕೆ ಕ್ಲಬ್‌ಗಳು, ಸಮುದಾಯ ಸೇವಾ ಯೋಜನೆಗಳು ಇತ್ಯಾದಿಗಳಲ್ಲಿ ಭಾಗವಹಿಸಿದರೆ ಒತ್ತಡ ಕಡಿಮೆ ಆಗುತ್ತದೆ ಎಂದರು.

Data showing deaths year wise

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read