HomeKarnatakaಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ನಡೆದ 650 ಕೋಟಿ ರೂ. ಅಷ್ಟಾಚಾರ ಪ್ರಕರಣದಲ್ಲಿ ಮೂರು ಉಪ ವಿಭಾಗಗಳ ಇಂಜಿನಿಯರಿಂಗ್ ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ 28 ಮಂದಿಯನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

2009 ರಿಂದ 2011 ರ ಅವಧಿಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿ ನಡೆಸಲಾಗಿತ್ತು. 402 ಕೋಟಿ ರೂ. ಕಾಮಗಾರಿಗಳಿಗೆ ಸಂಬಂಧಿಸಿದಂತೆ 1283 ಕೋಟಿ ರೂ. ಮೊತ್ತವನ್ನು ಗುತ್ತಿಗೆದಾರರು ಕ್ಲೇಮ್ ಮಾಡಿದ್ದಾರೆ.

ಈ ಸಂಬಂಧ 13 ಪ್ರಕರಣಗಳನ್ನು ಜಲಸಂಪನ್ಮೂಲ ಇಲಾಖೆ ವಿಚಕ್ಷಣ ದಳ ತನಿಖೆ ನಡೆಸಿದ್ದು, 650 ಕೋಟಿ ರೂ. ಅವ್ಯವಹಾರ ನಡೆದಿರುವುದು ಸಾಬೀತಾಗಿದೆ. ಇಂಜಿನಿಯರ್ ಗಳು, ಕಚೇರಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸೇರಿ ನಕಲಿ ಬಿಲ್ ಸೃಷ್ಟಿಸಿ ಅವ್ಯವಹಾರದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಪ್ರಕರಣ ಸಂಬಂಧ ಹಾಲಿ ಕರ್ತವ್ಯದಲ್ಲಿರುವ 28 ಇಂಜಿನಿಯರ್ ಮತ್ತು ಕಚೇರಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ನಿವೃತ್ತ ಹಾಗೂ ನಿಧನರಾದ 18 ಅಧಿಕಾರಿಗಳ ವಿರುದ್ಧವೂ ಕೋರ್ಟ್ ನಲ್ಲಿ ದಾವೆ ಹೂಡಲು ಜಲ ಸಂಪನ್ಮೂಲ ಇಲಾಖೆ ಕ್ರಮಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular