ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ 45 ದಿನಗಳ ಕಾಲ ನಡೆದ ಮಹಾಕುಂಭಮೇಳದಿಂದ ಮೂರು ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ಬಂದಿದೆ.
ಜನವರಿಯಲ್ಲಿ ಆರಂಭವಾದ ಮಹಾ ಕುಂಭಮೇಳ ಮಹಾಶಿವರಾತ್ರಿ ದಿನ ಮುಕ್ತಾಯವಾಗಿತ್ತು. 45 ದಿನಗಳ ಅವಧಿಯಲ್ಲಿ ನಡೆದ ಮಹಾ ಕುಂಭಮೇಳದಲ್ಲಿ 67 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. ಈ ಅವಧಿಯಲ್ಲಿ ಸರಕು ಹಾಗೂ ಸೇವೆಯ ವಾಣಿಜ್ಯ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ನಡೆದಿದೆ.
ಮಹಾ ಕುಂಭಮೇಳದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 3 ಲಕ್ಷ ಕೋಟಿ ರೂ.ಗೂ ಅಧಿಕ ಆದಾಯ ಬಂದಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಬಲ ಬಂದಂತಾಗಿದೆ.