BIG NEWS: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕನ್ನಡದ 3 ಸಿನಿಮಾಗಳಿಗೆ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸಿವೆ. ಕನ್ನಡದ ಮೂರು ಸಿನಿಮಾಗಳಿಗೆ ಪ್ರಶಸ್ತಿ ಲಭ್ಯವಾಗಿದೆ.

ಪ್ರಶಸ್ತಿ ಘೋಷಣೆಯಾದ 50ಕ್ಕೂ ಹೆಚ್ಚು ವಿಭಾಗಗಳಲ್ಲಿ ಕನ್ನಡದ ಮೂರು ಸಿನಿಮಾಗಳಿಗೆ ಮಾತ್ರ ಪ್ರಶಸ್ತಿ ಸಿಕ್ಕಿದೆ. ಕನ್ನಡ ಭಾಷೆಯ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ‘777 ಚಾರ್ಲಿ’ ಸಿನಿಮಾ ಆಯ್ಕೆಯಾಗಿದೆ.

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಸಿನಿಮಾಗೆ ಕನ್ನಡ ಭಾಷೆಯ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರಕಿದೆ. ನಾನ್ ಫೀಚರ್ ವಿಭಾಗದಲ್ಲಿ ಅನಿರುದ್ಧ ಜತ್ಕಾರ್ ನಿರ್ದೇಶನದ ‘ಬಾಳೆ ಬಂಗಾರ’ ಡಾಕ್ಯುಮೆಂಟರಿಗೆ ತೀರ್ಪುಗಾರರ ವಿಶೇಷ ಮೆಚ್ಚುಗೆ ಲಭಿಸಿದೆ. ಇದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಜೀವನ ಸಾಧನೆ ಕುರಿತ ಕಥಾಹಂದರವನ್ನು ಹೊಂದಿದೆ.

ಇನ್ನು ನಾನ್ ಫೀಚರ್ ಭಾಗ ಅತ್ಯುತ್ತಮ ಅನ್ವೇಷಣೆ ಸಿನಿಮಾ ವಿಭಾಗದಲ್ಲಿ ಕನ್ನಡದ ‘ಆಯುಷ್ಮಾನ್’ ಸಿನಿಮಾಗೆ ಪ್ರಶಸ್ತಿ ಲಭಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read