HomeKarnataka6 ನೇ ತರಗತಿ ಪ್ರವೇಶಾತಿ : ರಾಜ್ಯದ ವಸತಿ ಶಿಕ್ಷಣ ಶಾಲೆ/ಕಾಲೇಜುಗಳಲ್ಲಿ ವಿಶೇಷ ಮೀಸಲಾತಿ

6 ನೇ ತರಗತಿ ಪ್ರವೇಶಾತಿ : ರಾಜ್ಯದ ವಸತಿ ಶಿಕ್ಷಣ ಶಾಲೆ/ಕಾಲೇಜುಗಳಲ್ಲಿ ವಿಶೇಷ ಮೀಸಲಾತಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ.

ಜಿಲ್ಲೆಯ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular