ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ದಾಖಲಾತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಳ್ಳಾರಿ ಪ್ರವಾಸ
ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಫೆ.17 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ತೋರಣಗಲ್ಲಿನ ವಿದ್ಯಾನಗರ ಟೌನ್ ಶಿಪ್‌ನ ಹಯ್ಯಾತ್ ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ.

