BREAKING NEWS: ತಡರಾತ್ರಿ ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಘೋರ ದುರಂತ: 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 7 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, ನಂತರ 16 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಧಾವಿಸಲಾಗಿದೆ.

ಅಗ್ನಿಶಾಮಕ ಅಧಿಕಾರಿಯ ಪ್ರಕಾರ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ, ಕಟ್ಟಡದಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ಶಿಶು ಸಾವನ್ನಪ್ಪಿವೆ ಎಂದು ಹೇಳಲಾಗಿದೆ.

12 ಶಿಶುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

https://twitter.com/ANI/status/1794551869962109315

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read