ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ 5. 30 ಕೋಟಿ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಸಿಎಂಎಸ್ ಮಾಜಿ ನೌಕರ ಝೇವಿಯರ್ ಎಂದು ಗುರುತಿಸಲಾಗಿದೆ. ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್ ಹಾಕಿದ್ದರು. ಸದ್ಯ. 5.30 ಕೋಟಿ ಹಣ ಜಪ್ತಿ ಮಾಡಿಕೊಂಡ ಪೊಲೀಸರು ಉಳಿದ ಹಣ ಹಾಗೂ ಇನ್ನುಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ದರೋಡೆ ನಡೆದು 2 ದಿನದೊಳಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ದರೋಡೆ ಪ್ರಕರಣವನ್ನ ಭೇದಿಸಿದ್ದಾರೆ.
ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ ನನ್ನು ಕೂಡ ಬಂಧಿಸಲಾಗಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು.? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದನು. ಈತನ ಪ್ಲ್ಯಾನ್ ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎನ್ನಲಾಗಿದೆ.
