HomeKarnatakaಕೋವಿಡ್ ಪಾಸಿಟಿವ್ ಆದವರು 7 ದಿನ ʻಹೋಮ್ ಐಸೊಲೇಷನ್ʼ ಕಡ್ಡಾಯ

ಕೋವಿಡ್ ಪಾಸಿಟಿವ್ ಆದವರು 7 ದಿನ ʻಹೋಮ್ ಐಸೊಲೇಷನ್ʼ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು ಎಂದು ಸೂಚನೆ ನೀಡಲಾಗಿದೆ.

ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

 ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 400 ಜನ ಮನೆಯಲ್ಲಿ ಐಸೋಲೇಷನಲ್ಲಿದ್ದಾರೆ. ಇವರ ಮೇಲೆ ನಮ್ಮ ವೈದ್ಯರು ನಿಗಾ ವಹಿಸಲಿದ್ದು, ಮನೆಗಳಿಗೆ ಭೇಟಿ ಮಾಡಿ ತಪಾಸಣೆ ನಡೆಸಲಿದ್ದಾರೆ. ಅಗತ್ಯವೆನಿಸಿದರೆ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ತಪಾಸಣೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular