ಮುಂಬೈ: ಮಹಾರಾಷ್ಟ್ರದ ರಾಯಗಢದಲ್ಲಿ ಬಸ್ ಅಪಘಾತದಲ್ಲಿ 7 ಸಾವು ಕಂಡಿದ್ದು, 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಮಹಾರಾಷ್ಟ್ರದ ರಾಯಗಡದ ಖೋಪೋಲಿ ಪ್ರದೇಶದಲ್ಲಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ.
ರಾಯಗಡ ಎಸ್ಪಿ ಮಾಹಿತಿ ನೀಡಿ, ರಾಯಗಡದ ಖೋಪೋಲಿ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಬಿದ್ದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
Maharashtra| 7 people died & more than 25 injured after a bus fell into a ditch in Raigad's Khopoli area. Rescue operations underway: Raigad SP pic.twitter.com/kneqn5M4A5
— ANI (@ANI) April 15, 2023

