HomeIndiaBREAKING: ಪ್ರಯಾಣಿಕರ ವಾಹನಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು, ಒಬ್ಬರು...

BREAKING: ಪ್ರಯಾಣಿಕರ ವಾಹನಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು, ಒಬ್ಬರು ಗಂಭೀರ

ರಾಂಚಿ: ಜಾರ್ಖಂಡ್‌ ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ ಟ್ರಕ್ ಪ್ರಯಾಣಿಕರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಅವರನ್ನು ರಾಂಚಿಗೆ ಕಳುಹಿಸಲಾಗಿದೆ.

ರಾಜ್ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಲಾರಿ-ಬಾರ್ಲಾಂಗ್‌ನ ರಾಷ್ಟ್ರೀಯ ಹೆದ್ದಾರಿ(ಎನ್‌ಹೆಚ್) 23 ರಲ್ಲಿ ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಇಡೀ ಪ್ರಯಾಣಿಕ ವಾಹನವೇ ನಾಶವಾಗಿದೆ.

ಅಪಘಾತದ ಬಳಿಕ ಜನ ರಕ್ಷಣಾ ಕಾರ್ಯಾಚರಣೆಗಾಗಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಶೀಘ್ರದಲ್ಲೇ, ಪೊಲೀಸರು ಆಗಮಿಸಿದರು ಮತ್ತು ಗಾಯಾಳುಗಳನ್ನು ರಾಮಗಢ ಸದರ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಎಂಟು ಜನರನ್ನು ಕರೆತರಲಾಯಿತು ಮತ್ತು ಅವರಲ್ಲಿ ಏಳು ಜನರು ಈಗಾಗಲೇ ಸಾವನ್ನಪ್ಪಿದ್ದರು. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು, ಅವರ ತಲೆಗೆ ಗಾಯವಾಗಿತ್ತು. ಅವರ ಸ್ಥಿತಿ ಸ್ಥಿರವಾಗಿದೆ, ಆದರೆ ಅವರನ್ನು ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ರಾಮಗಢ ಸದರ್ ಆಸ್ಪತ್ರೆಯ ಸಿವಿಲ್ ಸರ್ಜನ್ ಅನಿಲ್ ಕುಮಾರ್ ಹೇಳಿದರು.

ಮೃತರು ಬ್ಯಾಂಡ್‌ ನ ಸದಸ್ಯರಾಗಿದ್ದು, ಹಜಾರಿಬಾಗ್ ಜಿಲ್ಲೆಯ ಬಾಲ್ಸಾಗ್ರಾದಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ವಾಹನವು ರಾಮಗಢ ಜಿಲ್ಲೆಯಲ್ಲಿ ರಾತ್ರಿ12 ಗಂಟೆಯ ಸುಮಾರಿಗೆ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಲಾರಿ ಬಳಿ ಟ್ರಕ್ ಓವರ್‌ಟೇಕ್ ಮಾಡುವಾಗ ಪ್ರಯಾಣಿಕರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಹಲವಾರು ಜನರು ಸಾವನ್ನಪ್ಪಿದ್ದಾರೆ, ಕೆಲವರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ. ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಹೆಚ್ಚಿನ ಮಾಹಿತಿಯನ್ನು ನಂತರ ಬಹಿರಂಗಪಡಿಸಲಾಗುವುದು” ಎಂದು ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅಲೋಕ್ ರಂಜನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular