HomeIndia7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಧರ್ಮಗುರು ಅರೆಸ್ಟ್

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಧರ್ಮಗುರು ಅರೆಸ್ಟ್

ಲಖನೌ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ಈ ಘಟನೆ ನಡೆದಿದೆ. 70 ವರ್ಷದ ಧರ್ಮಗುರು ಮೌಲಾನಾ ಮುಖ್ತಾರ್ ನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

7 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದು ಮನೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಧರ್ಮಗುರು ಮನೆಗೆ ಬಾಲಕಿ ಹೋಗುತ್ತಿರುವುದನ್ನು ಕಂಡು ಅನುಮಾನಗೊಂಡ ಸ್ಥಳೀಯರು ಹಿಂಬಾಲಿಸಿದ್ದಾರೆ. ಅಷ್ಟರಲ್ಲಿ ಧರ್ಮಗುರು ಬಾಲಕಿ ಮೇಲೆ ಅಟ್ಟಹಾಸಕ್ಕೆ ಯತ್ನಿಸಿದ್ದಾನೆ. ತಕ್ಷಣ ಬಾಲಕಿಯನ್ನು ರಕ್ಷಿಸಿದ ಸ್ಥಳೀಯರು ಆರೋಪಿಗೆ ಮನಬಂದಂತೆ ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಧರ್ಮಗುರುವನ್ನು ಪೊಲೀಸರು ಅಟ್ಟಾಡಿಸಿಕೊಂಡು ಹೋಗಿ ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular