HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವು

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಟ್ಟಾಗಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾಗಿರುವ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ವಿನೋದ್ ಹಾಗೂ ನಳಿನಾ ದಂಪತಿಯ ಪುತ್ರಿ ಆಕೃತಿ ಎಂಬ 7 ವರ್ಷದ ಮಗು ಮೃತ ದುರ್ದೈವಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗು ತುಂಬಾ ಹಠ ಮಾಡುತ್ತಿದೆ ಎಂದು ಪಕ್ಕದ ಮನೆಯ ನಂಜುಂಡಪ್ಪ, ಪಲ್ಲವಿ ದಂಪತಿಯ ಮನೆಗೆ ಕಳುಸಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಮೃತ ಬಾಲಕಿಯ ಕೈ, ಕಾಲಿನ ಬಳಿ ರಕ್ತ ಹೆಪ್ಪುಗಟ್ಟಿದ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ಎಫ್ ಎಸ್ ಎಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮಗುವಿಗೆ ಭಯ ಹುಟ್ಟಿಸಲು ಯಾವುದೋ ವಸ್ತುವಿನಿಂದ ಹೊಡೆಯುವಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular