HomeKarnatakaShocking News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

Shocking News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ನಿವೃತ್ತ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಬೆಂಗಳೂರಿನ ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

74 ವರ್ಷದ ಆರೋಪಿ ಶಿವಾಜಿನಗರದಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ. ತಾನಿದ್ದ ಕಟ್ಟದಲ್ಲಿಯೇ ಇದ್ದ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಭಾನುವಾರ ಈ ಘಟನೆ ನಡೆದಿದ್ದು, ಬಾಲಕಿ ನೋವಿನಿಂದ ಬಳಲುತ್ತಿದ್ದಾಗ ಆಕೆಯ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಶಿವಾಜಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular