HomeLive NewsGOOD NEWS : 'ರಾಜ್ಯ ಸರ್ಕಾರಿ' ನೌಕರರಿಗೆ ಗುಡ್ ನ್ಯೂಸ್ : ಈ 70 ಖಾಸಗಿ...

GOOD NEWS : ‘ರಾಜ್ಯ ಸರ್ಕಾರಿ’ ನೌಕರರಿಗೆ ಗುಡ್ ನ್ಯೂಸ್ : ಈ 70 ಖಾಸಗಿ ಆಸ್ಪತ್ರೆಗಳಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ವಿಸ್ತರಣೆ.!

ಬೆಂಗಳೂರು :   ರಾಜ್ಯದ ಈ 70 ಖಾಸಗಿ ಆಸ್ಪತ್ರೆಗಳಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ವಿವಿಧ ಯೋಜನೆಯಡಿಯಲ್ಲಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು “ಭಾವಿತ ನೊಂದಾವಣೆ” ಎಂದು ಪರಿಗಣಿಸಿರುವುದರಿಂದ 186 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೊಂದಾವಣೆಗೊಳಿಸಲಾಗಿರುತ್ತದೆ.

ಮುಂದುವರೆದು, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular