HomeIndiaBIG NEWS: ಜಲ ಜೀವನ್ ಮಿಷನ್ ಯೋಜನೆಯಡಿ ಶೇ. 71ರಷ್ಟು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ...

BIG NEWS: ಜಲ ಜೀವನ್ ಮಿಷನ್ ಯೋಜನೆಯಡಿ ಶೇ. 71ರಷ್ಟು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ದೇಶಾದ್ಯಂತ ಸುಮಾರು 71 ಪ್ರತಿಶತ ಗ್ರಾಮೀಣ ಕುಟುಂಬಗಳು ಈಗ ಜಲ ಶಕ್ತಿ ಮಿಷನ್ ಅಡಿಯಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಲಿಖಿತ ಉತ್ತರದಲ್ಲಿ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ತೆಲಂಗಾಣ, ಎ & ಎನ್ ದ್ವೀಪಗಳು, ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಮತ್ತು ಪುದುಚೇರಿ ಸೇರಿ ಒಂಬತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಿವೆ. ಆಗಸ್ಟ್ 15, 2019 ರಂದು ಜಲ ಜೀವನ್ ಮಿಷನ್ ಘೋಷಣೆಯ ಸಮಯದಲ್ಲಿ, 3.23 ಕೋಟಿ(17 ಪ್ರತಿಶತ) ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕಗಳನ್ನು ಹೊಂದಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲ್ಲಿಯವರೆಗೆ, ನವೆಂಬರ್ 29 ರ ಹೊತ್ತಿಗೆ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ವರದಿ ಮಾಡಿದಂತೆ, ಸುಮಾರು 10.46 ಕೋಟಿ ಹೆಚ್ಚುವರಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹೇಳಿದರು.

2024 ರ ವೇಳೆಗೆ ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ವೈಯಕ್ತಿಕ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular