HomeLatest NewsBIG NEWS : ನವೆಂಬರ್ 14 ರಂದು 72 ನೇ ಸಹಕಾರಿ ಸಪ್ತಾಹದ ಉದ್ಘಾಟನೆ :...

BIG NEWS : ನವೆಂಬರ್ 14 ರಂದು 72 ನೇ ಸಹಕಾರಿ ಸಪ್ತಾಹದ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದಲ್ಲಿ ನಡೆಯಲಿದೆ. “

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡುತ್ತೇನೆ. ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೆ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular