HomeKarnatakaBIG NEWS : ರಾಜ್ಯದಲ್ಲಿ 'SSLC' ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಕಡ್ಡಾಯ : ಪರೀಕ್ಷಾ...

BIG NEWS : ರಾಜ್ಯದಲ್ಲಿ ‘SSLC’ ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಕಡ್ಡಾಯ : ಪರೀಕ್ಷಾ ಮಂಡಳಿ ಸ್ಪಷ್ಟನೆ.!

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಶೇ.75 ಹಾಜರಾತಿ ಕಡ್ಡಾಯ ಕುರಿತು ಪರೀಕ್ಷಾ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ:07.02.2025ರಂದು Deccan Herald ದಿನಪತ್ರಿಕೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲು ಶೇ.75ಕ್ಕಿಂತ ಕಡಿಮೆ ಹಾಜರಾತಿ ಇದ್ದಲ್ಲಿ ಪರೀಕ್ಷೆ-2 ಮತ್ತು 3ಕ್ಕೂ ನೋಂದಣಿಗೆ ಅವಕಾಶ ಇಲ್ಲದ ಕುರಿತು ಹಾಗೂ ಮರು ದಾಖಲಾತಿಯಾಗುವ ಬಗ್ಗೆ ಪ್ರಕಟವಾಗಿರುವ ಸುದ್ದಿಯ ಕುರಿತು ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿದೆ.
ಶೇ.75 ಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-1, 2 ಮತ್ತು 3ಕ್ಕೆ ನೋಂದಣಿಗೆ ಅವಕಾಶ ವಿಲ್ಲದಿರುವ ಕುರಿತು ಮಂಡಳಿಯಿಂದ ಸುತ್ತೋಲೆ ಪ್ರಕಟವಾಗಿದ್ದು ಹಾಗೂ ಸದರಿ ವಿದ್ಯಾರ್ಥಿಗಳು 2025-26ನೇ ಶೈಕ್ಷಣಿಕ ಸಾಲಿಗೆ ಮರುದಾಖಲಾತಿಯಾಗಲು ಸುತ್ತೋಲೆಯಲ್ಲಿ ತಿಳಿಸಲಾಗಿದೆಯೆಂದು ವರದಿಯಾಗಿದೆ.

ಮಂಡಳಿಯ ಕಾಯ್ದೆ-1966 ನಿಯಮ-37 ರನ್ನಯ, ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. ಆದರೆ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಶೇ.75 ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ-2 ಮತ್ತು 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಮಾಡಿ ಪರೀಕ್ಷೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು. ಇದೇ ರೀತಿ 2024-25ನೇ ಸಾಲಿನ ಪರೀಕ್ಷೆಗೂ ಸಹ ಸದರಿ ನಿಯಮವನ್ನು ಮುಂದುವರೆಸಲಾಗುವುದು. ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಇರುವುದಿಲ್ಲ. ಇರುತ್ತದೆ ಎಂದು ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular