HomeKarnatakaಗಣರಾಜ್ಯೋತ್ಸವ ಪ್ರಯುಕ್ತ ಎಲ್ಲಾ ದೇವಾಲಯಗಳಲ್ಲಿ ಜ.25, 26ರಂದು ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ

ಗಣರಾಜ್ಯೋತ್ಸವ ಪ್ರಯುಕ್ತ ಎಲ್ಲಾ ದೇವಾಲಯಗಳಲ್ಲಿ ಜ.25, 26ರಂದು ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ

ಬಳ್ಳಾರಿ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಜ.25, 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ.

76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜ.25 ಮತ್ತು ಜ.26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಜ.26 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular