77 ಮಿಲಿಯನ್ ವೀಕ್ಷಣೆ ಪಡೆದ ‘ಮಾರ್ಟಿನ್’ ಟೀಸರ್

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಟೀಸರ್ ಫೆಬ್ರವರಿ 23ರಂದು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು, ಈ ಟೀಸರ್ ಇದೀಗ ಬರೋಬ್ಬರಿ 75 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. 8 ಲಕ್ಷ ಲೈಕ್ಸ್ ಹಾಗೂ 80 ಸಾವಿರ ಕಮೆಂಟ್ಸ್ ಕೂಡ ಈ ಟೀಸರ್ ಗೆ ದೊರೆತಿದೆ.

ಎಪಿ ಅರ್ಜುನ್ ನಿರ್ದೇಶಸುತ್ತಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ ಸೇರಿದಂತೆ ವೈಭವಿ, ಅನ್ವೇಶಿ ಜೈನ್, ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು ಐದು ಭಾಷೆಗಳಲ್ಲಿ ಈ ಸಿನಿಮಾ  ತೆರೆ ಕಾಣಲಿದೆ ಈ ಚಿತ್ರವನ್ನು ವಾಸವಿ ಎಂಟರ್ಪ್ರೈಸಸ್ ಹಾಗೂ ಉದಯ್ ಮೆಹತಾ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಉದಯ್ ಮೆಹತಾ ನಿರ್ಮಾಣ ಮಾಡಿದ್ದು ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read