HomeIndiaಒಂದೇ ದಿನದಲ್ಲಿ ಮತ್ತೆ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಒಂದೇ ದಿನದಲ್ಲಿ ಮತ್ತೆ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ


ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 77 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 1553 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531918 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44462462 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 526 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,55,103 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 35,693 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular