ನವದೆಹಲಿ : ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದ್ದು, ಪ್ರಧಾನಿ, ರಾಹುಲ್ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್
ನಿಮ್ಮೆಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು. ಈ ಐತಿಹಾಸಿಕ ಸಂದರ್ಭದಲ್ಲಿ, ಅಮೃತಕಲ್ ನಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸೋಣ. ಜೈ ಹಿಂದ್!ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಾವು ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುತ್ತೇವೆ ಮತ್ತು ಅವರ ದೃಷ್ಟಿಕೋನವನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಜೈ ಹಿಂದ್! ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
आप सभी को स्वतंत्रता दिवस की अनेकानेक शुभकामनाएं। आइए, इस ऐतिहासिक अवसर पर अमृतकाल में विकसित भारत के संकल्प को और सशक्त बनाएं। जय हिंद!
Best wishes on Independence Day. We pay homage to our great freedom fighters and reaffirm our commitment to fulfilling their vision. Jai Hind!
— Narendra Modi (@narendramodi) August 15, 2023
ರಾಹುಲ್ ಗಾಂಧಿ ಟ್ವೀಟ್
ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ! ಎಲ್ಲಾ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
भारत माता हर एक भारतीय की आवाज़ है!
सभी देशवासियों को स्वतंत्रता दिवस की हार्दिक शुभकामनाएं। 🇮🇳 pic.twitter.com/Db5NkDwLyd
— Rahul Gandhi (@RahulGandhi) August 14, 2023
ಸಿಎಂ ಸಿದ್ದರಾಮಯ್ಯ
1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ. ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭಕಾಮನೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ.
ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು… pic.twitter.com/6BdA3kWTJr— CM of Karnataka (@CMofKarnataka) August 15, 2023
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಎಲ್ಲಾ ಭಾರತೀಯರಿಗೆ 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
ಎಲ್ಲಾ ಭಾರತೀಯರಿಗೆ 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ. pic.twitter.com/mVdhH0MWL0
— H D Devegowda (@H_D_Devegowda) August 15, 2023