ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗದ ಮಿತಿ ಉಲ್ಲಂಘನೆ : 789 ಪ್ರಕರಣ ದಾಖಲು

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಸ್ಪೀಡ್ ರೆಡಾರ್ ಅಳವಡಿಸಿದ್ದು, ಈವರೆಗೆ 789 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ರಾಮನಗರ ಪೊಲೀಸರು ಸ್ಪೀಡ್ ರೆಡಾರ್ ಅಳವಡಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಒಟ್ಟು 789 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಎಕ್ಸ್ ಪ್ರೆಸ್ ವೇನಲ್ಲಿ ನಿಗದಿಪಡಿಸಿರುವ 100 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮವಾಗಿ ಪೊಲೀಸರು ದಶಪಥ ಹೆದ್ದಾರಿಯಲ್ಲಿ ಸ್ಪೀಡ್ ರೆಡಾರ್ ಅಳವಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read